ಬಾಲಿವುಡ್ ನಟ ಸತೀಶ್ ಕೌಶಿಕ್ ನಿಧನದ ಸುತ್ತ ಅನುಮಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ ‌:

ಬಾಲಿವುಡ್ ನಟ , ನಿರ್ದೇಶಕ ಸತೀಶ್ ಕೌಶಿಕ್ (Satish Kaushik) ಮೊನ್ನೆಯಷ್ಟೇ ಹೃದಯಾಘಾತದಿಂದ ನಿಧನರಾಗಿದ್ದು, ಇದೀಗ ಅವರ ಸಾವಿನ ಸುತ್ತ ಅನುಮಾನ ವ್ಯಕ್ತವಾಗಿದೆ.

ಸತೀಶ್ ಸಾವಿನ ಹಿಂದಿನ ದಿನ ಹೋಳಿ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಆ ಸ್ಥಳದಲ್ಲಿ ಔಷಧಿ ಸಿಕ್ಕಿದೆ ಎಂದು ಗೊತ್ತಾಗಿದೆ.
ಸತೀಶ್ ಸಾವಿನ ಅನುಮಾನದ ಹಿನ್ನೆಲೆಯಲ್ಲಿ ಪೊಲೀಸರು ಹೋಳಿ ಪಾರ್ಟಿಯಲ್ಲಿ ಭಾಗಿಯಾಗಿದ್ದ ಫಾರ್ಮ್ ಹೌಸ್ ಗೆ ಭೇಟಿ ನೀಡಿದ್ದರು.

ಪಾರ್ಟಿ ನಡೆದ ಸ್ಥಳದಲ್ಲಿ ಕೆಲವು ಔಷಧಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಸತೀಶ್ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೂ ಕಳುಹಿಸಿದ್ದರು ಎಂದು ಗೊತ್ತಾಗಿದೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಸತೀಶ್ ನಿಧನಕ್ಕೆ ಬಾಲಿವುಡ್ ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!