Saturday, April 1, 2023

Latest Posts

ಗಾಯಕಿ ವಾಣಿ ಜಯರಾಂ ನಿಧನದ ಸುತ್ತ ಅನುಮಾನ: ದೇಹ ಮರಣೋತ್ತರ ಪರೀಕ್ಷೆಗೆ ರವಾನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಖ್ಯಾತ ಗಾಯಕಿ ವಾಣಿ ಜಯರಾಂ ಸಾವನ್ನಪ್ಪಿದ್ದು, ಈಡಿಗ ಅವರ ನಿಧನ ಅನೇಕ ಅನುಮಾನಗಳನ್ನು ಮೂಡಿಸಿದೆ.

ತಾವು ವಾಸಿಸುತ್ತಿದ್ದ ಮನೆಯಲ್ಲಿ ಶವವಾಗಿ ಪತ್ತೆಯಾದ ಕಾರಣದಿಂದಾಗಿ ಮರಣೋತ್ತರ ಪರೀಕ್ಷೆಗಾಗಿ ಅವರ ದೇಹವನ್ನು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಂದ ನಂತರವಷ್ಟೇ ಅವರ ಸಾವಿನ ನಿಗೂಢ ಬಹಿರಂಗವಾಗಲಿದೆ.

ಸ್ಥಳೀಯರ ಪ್ರಕಾರ ವಾಣಿ ಒಬ್ಬರೇ ಮನೆಯಲ್ಲಿ ವಾಸವಿದ್ದರಂತೆ. ಮನೆಗೆಲಸದಾಕೆ ಬಂದು ಬಾಗಿಲು ಬಡಿದಾಗ, ಬಾಗಿಲು ತೆರೆದಿಲ್ಲ. ಹಾಗಾಗಿ ಪಕ್ಕದ ಮನೆಯವರಿಗೆ ತಿಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ಬಂದು ಮನೆಯ ಬಾಗಿಲು ತೆರೆದಾಗ, ವಾಣಿ ಜಯರಾಂ ನೆಲಕ್ಕೆ ಉರುಳಿ ಬಿದ್ದಿದ್ದರು ಎಂದು ಹೇಳಲಾಗುತ್ತಿದೆ. ಅವರ ಹಣೆಗೂ ಗಾಯವಾಗಿದ್ದು, ಬಿದ್ದಿರುವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಿದ್ದಲ್ಲಿಯೇ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲ ಅನುಮಾನಗಳಿಗೆ ಮರಣೋತ್ತರ ಪರೀಕ್ಷೆಯ ವರದಿಯೇ ಉತ್ತರವಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!