ಕೋವಿಡ್‌ ಪ್ರಕರಣಗಳಲ್ಲಿ ಇಳಿಮುಖ, 2,568 ಕೇಸ್‌ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,568 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು ಕಳೆದ ಮೂರು ದಿನಗಳಿಗೆ ಹೋಲಿಸಿದರೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಆರೋಗ್ಯ ಸಚಿವಾಲಯ ವರದಿಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ 31 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ದೇಶದ ಒಟ್ಟೂ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 19,509 ರಷ್ಟಿದ್ದು 2,802 ಮಂದಿ ಸೋಂಕಿನಿಂದ ಗುಣ ಮುಖರಾಗಿ ಬಿಡುಗಡೆಯಾಗಿದ್ದಾರೆ. ಚೇತರಿಕೆ ದರ 98.74% ದಷ್ಟಿದೆ.

ಇನ್ನು ದೇಶದಾದ್ಯಂತ ಒಟ್ಟಾರಡಯಾಗಿ 189.48 ಕೋಟಿ ಲಸಿಕೆ ವಿತರಣೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!