ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್ಲೋಡ್ ಮಾಡುವುದು ಅಥವಾ ನೋಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈ ಮೂಲಕ ಮಕ್ಕಳ ಮೇಲಿನ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಕಠಿಣ ಕಾನೂನಿನ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಕೇವಲ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್ಲೋಡ್ ಮಾಡುವುದು ಮತ್ತು ನೋಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರಿದ್ದ ದ್ವಿಸದಸ್ಯ ಪೀಠವು ತಳ್ಳಿಹಾಕಿತು. ತೀರ್ಪು ನೀಡುವಲ್ಲಿ ಹೈಕೋರ್ಟ್ ಮಹಾ ತಪ್ಪು ಎಸಗಿದೆ ಎಸಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ನ್ಯಾಯಾಲಯವು ‘Child pornography’ ಪದದ ಬಳಕೆಯನ್ನು ಅಸಮ್ಮತಿಗೊಳಿಸಿದೆ ಮತ್ತು ಸಂಸತ್ತು ಪೋಕ್ಸೊ ಕಾಯಿದೆಗೆ ತಿದ್ದುಪಡಿಯನ್ನು ತರಬೇಕು ಎಂದು ಸಲಹೆ ನೀಡಿತು. ನಾವು ಸುಗ್ರೀವಾಜ್ಞೆಯನ್ನು ತರಬಹುದು ಎಂದು ಸೂಚಿಸಿದ್ದೇವೆ. ಯಾವುದೇ ಆದೇಶಗಳಲ್ಲಿ ಇದನ್ನು `’Child pornography’ ಎಂದು ಉಲ್ಲೇಖಿಸದಂತೆ ನಾವು ಎಲ್ಲಾ ಕೆಳಹಂತದ ನ್ಯಾಯಾಲಯಗಳಿಗೆ ಸೂಚಿಸಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.