ಮಹದಾಯಿ ಯೋಜನೆ | ಕಾನೂನು ಹೋರಾಟದ ಬಳಿಕವೇ ಡಿಪಿಆರ್ ದೊರಕಿದೆ : ಸಿಎಂ ಬೊಮ್ಮಾಯಿ‌

ಹೊಸದಿಗಂತ ವರದಿ ಹುಬ್ಬಳ್ಳಿ:

ಮಹದಾಯಿ ಹಾಗೂ ಕಳಸಾ ಬಂಡೂರಿ ಯೋಜನೆ ಅನುಷ್ಠಾನದ ವಿಚಾರವಾಗಿ ಗೋವಾ ಸರ್ಕಾರದ ನಡೆಯ ಬಗ್ಗೆ ನನಗೆ ಗೊತ್ತಿಲ್ಲ. ಕಾನೂನು ಹೋರಾಟದ ಬಳಿಕವೇ ಡಿಪಿಆರ್ ದೊರಕಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ‌ ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡಿದರೇ ಕಾನೂನು‌ ಹೋರಾಟ ಮಾಡುತ್ತೇವೆ ಎಂಬ ಗೋವಾ ಸಚಿವರ ಹೇಳಿಕೆಗೆ ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದರು.

ಮಹದಾಯಿ ಅನುಷ್ಠಾನ ವಿಚಾರವಾಗಿ ಈಗಾಗಲೇ ಕಾನೂನು ಹೋಟರಾವಾಗಿ ಸುಪ್ರೀಂ ಕೋರ್ಟ್ ಆದೇಶ ಮೇಲೆ ಟ್ರಿಮಿನಲ್ ರಚನೆಯಾಗಿದೆ. 10 ವರ್ಷಗಳ ಕಾಲ ಈ ಕರಿತು ಎಲ್ಲ ಆಯಾಮಗಳ ಪರಿಶೀಲನೆ ಸಹ ನಡೆದಿದೆ. ಸುಪ್ರೀಂ ಆದೇಶದ ಅನ್ವಯ ಕೇಂದ್ರ ಸರ್ಕಾರ ಡಿಪಿಆರ್ ಗೆ ಅನುಮತಿ ನೀಡಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಹೆಚ್ .ವಿಶ್ವನಾಥ ಅವರ ಹೇಳಿಕೆ ಯಾವತ್ತು ಪ್ರತಿಕ್ರಿಯಿಸಿಲ್ಲ. ಅವರು ಪದೇ ಪದೇ ಈ ರೀತಿ ಹೇಳಿಕೆ ನೀಡುತ್ತಿರುತ್ತಾರೆ. ಅದರ ಬಗ್ಗೆ ಹೆಚ್ಚು ಮಾತನಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರುವರಿ 6ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ‘ಇಂಡಿಯಾ ಎನರ್ಜಿ ವೀಕ್‌’ ಕಾರ್ಯಕ್ರಮ ಉದ್ಘಾಟಿಸುವರು. ನಂತರ ತುಮಕೂರು ಜಿಲ್ಲಾ ಪ್ರವಾಸಕ್ಕೆ ತೆರಳುವರು. ಅಲ್ಲಿನ ಗುಬ್ಬಿ ತಾಲ್ಲೂಕಿನ ಬಿದೇರಹಳ್ಳಿಯಲ್ಲಿ ಎಚ್‌ಎಎಲ್‌ನ ಹೆಲಿಕಾಪ್ಟರ್‌ ಉತ್ಪಾದನಾ ಕಾರ್ಖಾನೆಯನ್ನು ಉದ್ಘಾಟಿಸುವರು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!