Tuesday, July 5, 2022

Latest Posts

ಡಾ.ಬಿ.ಎಂ.ಹೆಗ್ಗಡೆಯವರಿಗೆ ಡಾ.ಅನುಪಮಾ ನಿರಂಜನ ವೈದ್ಯಕೀಯ-ವಿಜ್ಞಾನ ಸಾಹಿತ್ಯ ಪ್ರಶಸ್ತಿ ಪ್ರದಾನ

ಹೊಸದಿಗಂತ ವರದಿ,ಮಂಗಳೂರು:

ಕರ್ನಾಟಕ ಕನ್ನಡ ಪುಸ್ತಕ ಪ್ರಾಧಿಕಾರದ 2019ನೇ ಸಾಲಿನ ಡಾ.ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಡಾ.ಬಿ.ಎಂ.ಹೆಗ್ಗಡೆ ಅವರಿಗೆ ನಹರದ ಅವರ ನಿವಾಸದಲ್ಲಿ ಶುಕ್ರವಾರ ಪ್ರದಾನ ಮಾಡಲಾಯಿತು.
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಹಾಗೂ ಪುಸ್ತಕ ಪ್ರಾಧಿಕಾರದ ಸದಸ್ಯರಾದ ಟಿ.ಎ.ಎನ್.ಖಂಡಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸಿ. ರಾಜೇಶ್ ಹಾಗೂ ಡಾ.ಬಿ.ಎಂ.ಹೆಗ್ಗಡೆಯವರ ಕುಟುಂಬದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕನ್ನಡ ಪುಸ್ತಕ ಪ್ರಾಧಿಕಾರದ 2019ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನ ಪ್ರದಾನ ಸಮಾರಂಭ ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು, ಆದರೆ ಅನಿವಾರ್ಯ ಕಾರಣಗಳಿಂದ ಡಾ.ಬಿ.ಎಂ.ಹೆಗ್ಗಡೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.
ಆದ ಕಾರಣ ಪ್ರಾಧಿಕಾರದ ಅಧ್ಯಕ್ಷರು ಮಂಗಳೂರಿನ ಅವರ ನಿವಾಸಕ್ಕೆ ಭೇಟಿ ನೀಡಿ ಶುಕ್ರವಾರ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss