ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಅರುಣ್ ಕೆ ಐಪಿಎಸ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಎಸ್‌ಪಿ ಅಕ್ಷಯ್ ಮಚೀಂದ್ರ ನೂತನ ಎಸ್ಪಿಯವರಿಗೆ ದಂಡ ಹಸ್ತಾಂತರಿಸುವ ಮೂಲಕ ಅಧಿಕಾರ ನೀಡಿದರು.
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ಅರುಣ್ ಕೆ., ಕಾನೂನು ಬಾಹಿರ ಚಟುವಟಿಕೆಗಳಿಗೆ ಕಠಿಣ ಕ್ರಮ ಜರುಗಿಸುವುದಲ್ಲದೇ, ನೈತಿಕ ಪೊಲೀಸ್‌ಗಿರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ವೃತ್ತಿಪರ ರೀತಿಯಲ್ಲಿ ಸಾರ್ವಜನಿಕ ಸಮಸ್ಯೆಗಳನ್ನು ಅಲಿಸಲಾಗುವುದು ಎಂದು ಹೇಳಿದ್ದಾರೆ.