ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪದ್ಮಶ್ರೀ ಪುರಸ್ಕೃತ ಡಾ.ಅಶೋಕ್ ಪನಗರಿಯಾ ನಿಧನ: ಪ್ರಧಾನಿ ಮೋದಿ ಸಂತಾಪ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ನರರೋಗತಜ್ಞ ಮತ್ತು ಪದ್ಮಶ್ರೀ ಪುರಸ್ಕೃತರಾಗಿದ್ದ ಡಾ.ಅಶೋಕ್ ಪನಗರಿಯಾ ಅವರು ವೈದ್ಯಕೀಯ ಸಮಸ್ಯೆಗಳಿಂದಾಗಿ ಇಂದು ನಿಧನ ಹೊಂದಿದ್ದಾರೆ.
71 ವರ್ಷ ವಯಸ್ಸಾಗಿದ್ದ ಡಾ. ಪನಗರಿಯಾ ಅವರು ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್​ ಬೆಂಬಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಡಾ.ಅಶೋಕ್ ಪನಗರಿಯಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ‘ಡಾ.ಪನಗರಿಯಾ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳು ಬರುವ ತಲೆಮಾರುಗಳ ವೈದ್ಯರು ಮತ್ತು ಸಂಶೋಧಕರಿಗೆ ಉಪಯುಕ್ತವಾದುದು’ ಎಂದಿದ್ದಾರೆ.
ಕೊರೋನಾ ಸಮಯದಲ್ಲಿ ಡಾ. ಪನಗರಿಯ ಅವರು ರಾಜಸ್ಥಾನದಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದು, ವೈದ್ಯಕೀಯ ತಜ್ಞರಾಗಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸ್ಮರಿಸಿದ್ದಾರೆ. ಇಂಧನ ಸಚಿವ ಬಿ.ಡಿ.ಕಲ್ಲಾ, ಬಿಜೆಪಿ ರಾಜ್ಯ ಅಧ್ಯಕ್ಷ ಸತೀಶ್ ಪೂನಿಯಾ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಇತರ ನಾಯಕರು ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss