September 23, 2026
Wednesday, September 23, 2026
spot_img

ಇಂದು ಬನ್ನೇರುಘಟ್ಟದಲ್ಲಿ ಡಾ. ಸಿ.ಜೆ. ರಾಯ್ ಅಂತ್ಯಕ್ರಿಯೆ! ‘ವೈಟ್ ಹೌಸ್’ನಲ್ಲಿ ಅಂತಿಮ ದರ್ಶನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಹಾಗೂ ಖ್ಯಾತ ಉದ್ಯಮಿ ಡಾ. ಸಿ.ಜೆ. ರಾಯ್ ಅವರ ಅಂತ್ಯಕ್ರಿಯೆ, ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕುಟುಂಬ ಮೂಲಗಳ ಪ್ರಕಾರ, ಡಾ. ರಾಯ್ ಅವರು ತಮ್ಮ ಆಪ್ತರ ಬಳಿ ಈ ಸ್ಥಳದಲ್ಲೇ ಅಂತ್ಯಸಂಸ್ಕಾರ ನಡೆಸಬೇಕು ಎಂಬ ಆಸೆಯನ್ನು ಮೊದಲೇ ಹೇಳಿಕೊಂಡಿದ್ದರು ಎನ್ನಲಾಗಿದೆ.

ಅಂತ್ಯಕ್ರಿಯೆಗೆ ಮುನ್ನ, ಮೃತ ಡಾ. ಸಿ.ಜೆ. ರಾಯ್ ಅವರ ಪಾರ್ಥಿವ ಶರೀರವನ್ನು ಕೋರಮಂಗಲದಲ್ಲಿರುವ ವೈಟ್ ಗೋಲ್ಡ್ ಸಂಸ್ಥೆಯ ಮಾಲೀಕ ಹಾಗೂ ಅವರ ಸಹೋದರ ಬಾಬು ಜೋಸೆಫ್ ಅವರ ಒಡೆತನದ ‘ವೈಟ್ ಹೌಸ್’ನಲ್ಲಿ ಅಂತಿಮ ದರ್ಶನಕ್ಕಾಗಿ ಇರಿಸಲಾಗುತ್ತದೆ. ಸಂಬಂಧಿಕರು, ಆಪ್ತರು ಹಾಗೂ ಅಭಿಮಾನಿಗಳು ಇಲ್ಲಿ ಅಂತಿಮ ಗೌರವ ಸಲ್ಲಿಸಲು ಅವಕಾಶ ಕಲ್ಪಿಸಲಾಗಲಿದೆ.

ಇದನ್ನೂ ಓದಿ:

ಇಂದು ಸಂಜೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಅಂತ್ಯಕ್ರಿಯೆ ನೆರವೇರಲಿದ್ದು, ಇದರಲ್ಲಿ ನಾಡಿನ ಹಲವು ಪ್ರಮುಖ ಉದ್ಯಮಿಗಳು, ಚಿತ್ರರಂಗದ ಗಣ್ಯರು ಮತ್ತು ರಾಜಕೀಯ ಮುಖಂಡರು ಭಾಗವಹಿಸುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !