ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ ಜಯದೇವ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಸ್ಪರ್ಧೆ ವಿಚಾರವಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, ಲೊಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಡಾ.ಮಂಜುನಾಥ್ ಸಮ್ಮತಿ ಸೂಚಿಸುವುದಿಲ್ಲ ಎಂದು ಹೇಳಿದ್ದಾರೆ.
ಮಂಜುನಾಥ್ ಇಡೀ ದೇಶಾದ್ಯಂತ ತಮ್ಮದೇ ಆದ ಹೆಸರು ಮಾಡಿದ್ದಾರೆ . ಅವರು ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ಬರುವುದು ಸರಿಯಲ್ಲ. ಅವರಿಗೆ ಈಗ ಒಂದು ಒಳ್ಳೆಯ ಸ್ಥಾನವಿದೆ. ಈ ಸಮಯದಲ್ಲಿ ರಾಜಕೀಯ ಪ್ರವೇಶ ಮಾಡಿ ಎಂದು ನಾನು ಒತ್ತಾಯಿಸಿಲ್ಲಾ ಎಂದು ಹೇಳುವ ಮೂಲಕ ಸಿ.ಎನ್.ಮಂಜುನಾಥ್ ಅವರ ರಾಜಕೀಯ ಪ್ರವೇಶವನ್ನು ನಿರಾಕರಿಸಿದ್ದಾರೆ.
ವ್ಯಕ್ತಿತ್ವಕ್ಕೆ ಕಳಂಕ ತರುವ ತೀರ್ಮಾನವನ್ನು ನಾವು ಮಾಡುವುದಿಲ್ಲ. ರಾಜಕೀಯಕ್ಕೆ ಬರುವುದಕ್ಕೆ ಅವರು ಸಮ್ಮತಿಸಿಲ್ಲ ಎಂದು ಭಾವಿಸಿದ್ದೇನೆ ಎಂದು ಹೇಳಿದರು.
ಇನ್ನು ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ಇನ್ನೊಂದು ವಾರದಲ್ಲಿ ತೀರ್ಮಾನವಾಗಲಿದೆ. ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಚರ್ಚಿಸಲಿದ್ದಾರೆ ಎಂದರು.