ಚುನಾವಣಾ ಆಯೋಗಕ್ಕೆ ಮಹತ್ವದ ಪತ್ರ ಬರೆದ ಡಾ.ಸಿ.ಎನ್.ಮಂಜುನಾಥ್: ಏನಿದೆ ಪತ್ರದಲ್ಲಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಯ ಮತ ಎಣಿಕೆಗೆ ಜೂನ್ 4 ರಂದು ಬೆಳಗ್ಗೆ 8 ಗಂಟೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ರಾಜ್ಯದ 28 ಕ್ಷೇತ್ರಗಳ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ.

ಜಿಲ್ಲಾಧಿಕಾರಿಗಳು ಈಗಾಗಲೇ ಸಕಲ ಸಿದ್ಧತೆ ನಡೆಸಿದ್ದಾರೆ. ಫಲಿತಾಂಶ ಪ್ರಕಟವಾಗುವ ಮುನ್ನವೇ ಬಿಜೆಪಿಯ ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ. ಸಿಎನ್​ ಮಂಜುನಾಥ್ ಅವರು ಚುನಾವಣಾ ಆಯೋಗಕ್ಕೆ ಮಹತ್ವದ ಪತ್ರ ಬರೆದು ಮತ ಎಣಿಕೆ ಕೇಂದ್ರಗಳಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದಾರೆ.

ಏನಿದೆ ಪತ್ರದಲ್ಲಿ:

  1. ಹೆಚ್ಚುವರಿ ಭದ್ರತಾ ಪಡೆಗಳ ನಿಯೋಜನೆ ಮಾಡಬೇಕು.
  2. ಎಣಿಕೆ ಕೇಂದ್ರದ ಸುತ್ತಲೂ ಹೆಚ್ಚುವರಿ ಪೊಲೀಸ್ ಮತ್ತು ಅರೆಸೇನಾ ಪಡೆಗಳ ನಿಯೋಜನೆ ಮಾಡಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕು.
  3. ಯಾವುದೇ ವ್ಯಕ್ತಿಯ ಅನಧಿಕೃತ ಪ್ರವೇಶ ಅಥವಾ ಉಲ್ಲಂಘನೆಯ ಪ್ರಯತ್ನಗಳನ್ನು ತಡೆಗಟ್ಟಲು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು.
  4. ಪಕ್ಷದ ಏಜೆಂಟ್‌ಗಳು ಸೇರಿದಂತೆ ಮತ ಎಣಿಕೆ ಪ್ರದೇಶವನ್ನು ಪ್ರವೇಶಿಸುವ ಎಲ್ಲಾ ವ್ಯಕ್ತಿಗಳನ್ನು ಸಂಪೂರ್ಣವಾಗಿ ತಪಾಸಣೆ ಮಾಡಬೇಕು.
  5. ಅಧಿಕಾರಿಗಳು ಮತ್ತು ಮಾಧ್ಯಮ ಸಿಬ್ಬಂದಿ ಅವರ ಉಪಸ್ಥಿತಿಯು ಅತ್ಯಗತ್ಯವಾಗಿದ್ದು, ಅವರ ಪೂರ್ವ ಅನುಮತಿ ಪಡೆದ ವ್ಯಕ್ತಿಗಳಿಗೆ ಮಾತ್ರ ಅವಕಾಶ ಮಾಡಿಕೊಡಬೇಕು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!