September 23, 2026
Wednesday, September 23, 2026
spot_img

ರಾಜ್ಯದ ಏಕೈಕ ಡಿಸಿಎಂ ಆಗಿ ಡಾ. ಜಿ. ಪರಮೇಶ್ವರ್ ಅಧಿಕಾರ ಸ್ವೀಕಾರ, ಗಣ್ಯರಿಂದ ಶುಭಾಷಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಇಂದು ನಡೆದ ಭವ್ಯ ಸಮಾರಂಭದಲ್ಲಿ ಡಿ. ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಿಎಂಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಡಿ. ಕೆ. ಶಿವಕುಮಾರ್ ಭಗವಂತ ಹಾಗೂ ಸಾರ್ವಜನಿಕರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ದೀರ್ಘಾವಧಿಯ ಚರ್ಚೆಗಳ ನಂತರ, ಹಿರಿಯ ನಾಯಕ ಡಾ. ಜಿ. ಪರಮೇಶ್ವರ್‌ನ್ನು ಏಕೈಕ ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ. ಮೊದಲ ಹಂತದಲ್ಲಿ ಮುಖ್ಯಮಂತ್ರಿಗಳೊಂದಿಗೆ ಯು. ಟಿ. ಖಾದರ್, ಎಂ. ಬಿ. ಪಾಟೀಲ್, ಕೆ. ಜೆ. ಜಾರ್ಜ್ ಮತ್ತು ಕೃಷ್ಣ ಬೈರೇಗೌಡ ಸೇರಿದಂತೆ ಒಟ್ಟು 13 ನಾಯಕರು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಕೋಡಿಮಠದ ಶ್ರೀಗಳು ಈ ಹಿಂದೆ ನುಡಿದಿದ್ದ ಭವಿಷ್ಯ ಇಂದು ನಿಜವಾಗಿದೆ ಎಂದು ಡಿಕೆಶಿ ಪತ್ನಿ ಉಷಾ ಶಿವಕುಮಾರ್ ಹರ್ಷ ವ್ಯಕ್ತಪಡಿಸಿದರು. ಸಾಮಾನ್ಯ ಕುಟುಂಬದಿಂದ ಬಂದ ಶಿವಕುಮಾರ್ ದಶಕಗಳ ಕಾಲ ನಡೆಸಿದ ಹೋರಾಟ ಮತ್ತು ತ್ಯಾಗಕ್ಕೆ ಇಂದು ತಕ್ಕ ಪ್ರತಿಫಲ ಸಿಕ್ಕಿದೆ ಎಂದು ಭಾವುಕರಾದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !