ಪಠ್ಯಪುಸ್ತಕದಲ್ಲಿ ಡಾ.ಹೆಡಗೆವಾರ್ ಭಾಷಣ ಸೇರ್ಪಡೆ ಸಮರ್ಥಿಸಿಕೊಂಡ -ಸಿ.ಟಿ.ರವಿ

ಹೊಸದಿಗಂತ ವರದಿ ಕಲಬುರಗಿ:‌ 

ರಾಜ್ಯದ ಪಠ್ಯಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೊದಲ ಸರಸಂಘಚಾಲಕರಾದ ಡಾ. ಕೇಶವ ಬಲಿರಾಮ ಹೆಡಗೆವಾರ್ ಅವರ ಭಾಷಣ ಸೇರ್ಪಡೆಯಾದರೆ ತಪ್ಪೇನು ಇಲ್ಲ. ಅವರೊಬ್ಬ ರಾಷ್ಟ್ರವಾದಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ‌ಸಿ.ಟಿ. ರವಿ ಸಮರ್ಥಿಸಿಕೊಂಡರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್ ಹಾಗೂ ಎಡಪಂಥೀಯರು ರಾಷ್ಟ್ರೀಯ ವಿಚಾರಧಾರೆಗಳನ್ನು ಮುಚ್ಚಿಟ್ಟಿದ್ದರು. ನಾವು ಈಗ ಅದನ್ನು ಮಕ್ಕಳಿಗೆ ತಿಳಿಸುತ್ತಿದ್ದೇವೆ ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.ಪ್ರತಿ ಸರ್ಕಾರ ಆಡಳಿತ ನಡೆಸುವ ದೂರದೃಷ್ಟಿ ಇಟ್ಟುಕೊಂಡಿರುತ್ತದೆ. ಬಿಜೆಪಿ ರಾಷ್ಟ್ರವಾದ ತತ್ವ ಮತ್ತು ಚಿಂತನೆ ಹೊಂದಿದೆ ಎಂದರು.

ಸಿಎಂ ಬದಲಾವಣೆ ಇಲ್ಲ

ತ್ರಿಪುರಾದಲ್ಲಿ ಬದಲಾವಣೆಯಾದಂತೆ ಕರ್ನಾಟಕದಲ್ಲಿಯೂ ಮುಖ್ಯಮಂತ್ರಿ ಬದಲಾವಣೆ ‌ಆಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿ‌ನ ವಿಧಾನಸಭೆ ಚುನಾವಣೆ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ. ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ ಬೇಡವೋ‌ ಎಂಬುದನ್ನು ಅವರು ಹಾಗೂ ಹೈಕಮಾಂಡ್ ನಾಯಕರು ನಿರ್ಧರಿಸುತ್ತಾರೆ ಎಂದರು.

ಪಿಎಸ್ಐ ‌ಅಕ್ರಮ ನೇಮಕಾತಿಯ ತನಿಖೆ ಬಗ್ಗೆ ವಿರೋಧ ಪಕ್ಷದವರಿಗೆ ತೃಪ್ತಿ ಇಲ್ಲದಿದ್ದರೆ ಅವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಿ. ನಾವು ಯಾರನ್ನೂ ಬಿಟ್ಟಿಲ್ಲ. ಇಲ್ಲಿಯವರೆಗೆ 200ಕ್ಕೂ ಹೆಚ್ಚು ಜನರನ್ನು ವಿಚಾರಣೆ ಮಾಡಿದ್ದೇವೆ. 40 ಜನರನ್ನು ವಶಕ್ಕೆ ಪಡೆದಿದ್ದೇವೆ. ವಿಚಾರಣೆ ಮತ್ತು ತನಿಖೆ ಈಗಲೂ ನಡೆಯುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!