ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತುಹಾಕಲಾಗಿದೆ ಎಂಬ ಪ್ರಕರಣದಲ್ಲಿ ಇದೇ ಮೊದಲ ಬಾರಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಸಾರ್ವಜನಿಕ ಹೇಳಿಕೆ ನೀಡಿದ್ದಾರೆ.
‘ಈಗ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿವೆ. ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ. ಕ್ಷೇತ್ರದ ಮೇಲಿನ ಅಭಿಮಾನ ಹೀಗೇ ಇರಲಿ ಎಂದು ಅವರು ತಿಳಿಸಿದ್ದಾರೆ. ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸಿದ ಎಲ್ಲರಿಗೂ ಧನ್ಯವಾದ. ತನಿಖೆಯ ಹಂತದಲ್ಲಿ ಹೆಚ್ಚಿನದನ್ನು ಮಾತನಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಶನಿವಾರ ಸಾಕ್ಷಿ ದೂರುದಾರನಾಗಿದ್ದ ‘ಮಾಸ್ಕ್‌ಮ್ಯಾನ್’ ಚಿನ್ನಯ್ಯನ ಬಂಧನವಾಗುತ್ತಿದ್ದಂತೆಯೇ ಶ್ರೀ ಕ್ಷೇತ್ರ ಧರ್ಮಸ್ಥಳದ ಫೇಸ್‌ಬುಕ್ ಅಧಿಕೃತ ಸಾಮಾಜಿಕ ಜಾಲತಾಣ ಪುಟದಲ್ಲಿ ಶಿವ ರುದ್ರತಾಂಡವ ಮಾಡುತ್ತಿರುವ ಫೋಟೋವನ್ನು ಅಪ್ಲೋಡ್ ಮಾಡಲಾಗಿದೆ.