ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ಸುತ್ತೂರು ಮಠದಲ್ಲಿ ಆಯೋಜಿಸಲಾಗಿದ್ದ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 108 ನೇ ಜಯಂತಿ ಮಹೋತ್ಸವ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಶ್ರೀ ಸುತ್ತೂರು ಕ್ಷೇತ್ರ ವೀರಸಿಂಹಾಸನ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿ, ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠದಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು, ತುಮಕೂರು ಶ್ರೀ ಸಿದ್ಧಗಂಗಾ ಕ್ಷೇತ್ರದ ಶ್ರೀ ನಿ.ಪ್ರ.ಸ್ವ. ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ಸ್ಥಳೀಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ಗಣ್ಯರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.