ಹೊಸದಿಗಂತ ವರದಿ ಯಲ್ಲಾಪುರ :
ವಿಶ್ವದರ್ಶನ ಎಜ್ಯುಕೇಶನ್ ಸೊಸೈಟಿ ಆರಂಭಿಸಿರುವ ಡಾ. ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್ ನ್ನು ಸೋಮವಾರ ದೀಪ ಬೆಳಗಿಸುವ ಮೂಲಕ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸಿದರು.
ಉದ್ಯಮಿ ಡಾ. ವಿಜಯ ಸಂಕೇಶ್ವರ, ಕರ್ನಾಟಕ ವಿ.ವಿ.ಯ ಕುಲಪತಿ ಡಾ.ಕೆ.ಬಿ.ಗುಡಸಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಉದ್ಯಮಿ ಎಸ್.ಎಚ್.ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ,ಪತ್ರಕರ್ತ ಹರಿಪ್ರಕಾಶ ಕೋಣೆಮನೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.
ಪ್ರಾಚಾರ್ಯ ನಾಗರಾಜ ಇಳೆಗುಂಡಿ ಮೀಡಿಯಾ ಸ್ಕೂಲ್ ಪರಿಚಯಿಸಿದರು.