ಆದಿಚುಂಚನಗಿರಿ ಶ್ರೀಮಠದಲ್ಲಿ ಜಗದ್ಗುರು ಡಾ. ಬಾಲಗಂಗಾಧರನಾಥ ಶ್ರೀ 77ನೇ ಜಯಂತ್ಯುತ್ಸವ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪರಮಪೂಜ್ಯ ಜಗದ್ಗುರು ಯುಗಯೋಗಿ ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾll ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 77ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ॥ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರು ದಿವ್ಯ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು.


ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಯವರು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.


ಇದೇ ಸಂದರ್ಭದಲ್ಲಿ ಶ್ರೀ ಗುರು ಚರಿತೆ ಪುಸ್ತಕವನ್ನು ಮತ್ತು ಪ್ರಜ್ಞಾನ ವಿಶೇಷ ಸಂಚಿಕೆಯನ್ನು ಪೂಜ್ಯ ಮಹಾ ಸ್ವಾಮೀಜಿಯರು ಬಿಡುಗಡೆ ಮಾಡಿ ಆಶೀರ್ವದಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!