ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಡಾ.ಕೆ.ಸುಧಾಕರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಇದರ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರ ರಾಜೀನಾಮೆಗೆ ಒತ್ತಾಯ ಕೇಳಿಬಂದಿದೆ.
ಈ ಹಿಂದೆ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಒಂದು ಮತದ ಲೀಡ್‌ನಿಂದ ಗೆದ್ದರೂ ರಾಜೀನಾಮೆ ನೀಡುವುದಾಗಿ ಶಾಸಕ ಪ್ರದೀಪ್ ಈಶ್ವರ್ ಸವಾಲು ಹಾಕಿದ್ದರು. ಹೀಗಾಗಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಡಾ.ಕೆ. ಸುಧಾಕರ್ (Dr K Sudhakar) ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,62,099 ಮತಗಳ ಅಂತರದಿಂದ ಜಯಭೇರಿ ಮೊಳಗಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಸಚಿವ ಸುಧಾಕರ್ ಅವರು ಈ ಬಾರಿ ಲೋಕಸಭಾ ಟಿಕೆಟ್ ಪಡೆದು ಗೆದ್ದು ಬೀಗಿದ್ದಾರೆ. ಹೀಗಾಗಿ ಶಾಸಕ ಪ್ರದೀಪ್ ಈಶ್ವರ್ ಈ ಹಿಂದೆ ಹೇಳಿದ್ದ ಮಾತುಗಳನ್ನು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್ ಮಾಡುತ್ತಿದ್ದಾರೆ.