ಡಾ.ಮಂಜುನಾಥ್, ಹೆಚ್.ಡಿ.ಕುಮಾರಸ್ವಾಮಿ ಗೆಲುವಿಗಾಗಿ ಕಾರ್ಯಕರ್ತರಿಂದ ವಿಶೇಷ ಪೂಜೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆ ಮುಗಿದಿದೆ. ಅದರಂತೆ ಜೂನ್ 4ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಎಲ್ಲರಲ್ಲೂ ಕುತೂಹಲ ಮೂಡಿದೆ.

ಇದೇ ವೇಳೆ ರಾಮನಗರ ಜೆಡಿಎಸ್ ನ ಕಾರ್ಯಕರ್ತರು ಡಾ.ಸಿ.ಎನ್​. ಮಂಜುನಾಥ್ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಗೆಲುವಿಗಾಗಿ ಉರುಳುಸೇವೆ ಹಾಗೂ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹೌದು, ಶಕ್ತಿ ಚಾಮುಂಡೇಶ್ವರಿ ದೇವತೆ ಮೊರೆ ಹೋಗಿದ್ದು, ತನ್ನ ಪ್ರೀತಿಯ ನಾಯಕನ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನದ ಆವರಣದಲ್ಲಿ ಉರುಳು ಸೇವೆ ನಡೆಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಜೊತೆಗೆ, 101 ಈಡುಗಾಯಿ ಓಡೆದು ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿ. ಎನ್. ಮಂಜುನಾಥ್ ಹಾಗೂ ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ವಿಜಯಪತಾಕೆ ಹಾರಿಸಲು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಅದಲ್ಲದೆ, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವ ನಿರೀಕ್ಷೆಯಲ್ಲಿದ್ದಾರೆ, ಕೇಂದ್ರದಲ್ಲಿ ಇಬ್ಬರಿಗೂ ಸಚಿವ ಸ್ಥಾನ ಸಿಗಬೇಕು ಎಂದು ಘೋಷಣೆಗಳನ್ನು ಕೂಗಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!