ರಾಜಕೀಯಕ್ಕೆ ಡಾ ಮಂಜುನಾಥ್ ಪ್ರವೇಶ: ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ (Dr CN Manjunath) ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದು ಖಚಿತವಾಗಿದೆ.

ಮಾರ್ಚ್ 14ರಂದು ಮಂಜುನಾಥ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಮಂಜುನಾಥ್ ಅವರು ಬಿಜೆಪಿ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡುತ್ತಿದ್ದಾರೆ.

ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಮಲ್ಲೇಶ್ವರಂ ಕಚೇರಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದದಲ್ಲಿ‌ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭಾ ಪ್ರತಿಪಕ್ಷ ನಾಯಕ ಅಶೋಕ್ ಸೇರಿದಂತೆ ಪ್ರಮುಖ ನಾಯಕರ ಸಮ್ಮುಖದಲ್ಲಿ ಮಂಜುನಾಥ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಡಾ. ಸಿ.ಎನ್.‌ ಮಂಜುನಾಥ್‌ ಅವರು ಇನ್ನೂ ಬಿಜೆಪಿ ಸೇರಿಲ್ಲ. ಆದ್ರೆ, ಟಿಕೆಟ್ ಖಚಿತವಾಗಿದೆ. ಆದರೂ ಸಹ ಬಿಜೆಪಿಯಿಂದ ಇನ್ನೂ ಅಧಿಕೃತವಾಗಿ ಟಿಕೆಟ್‌ ಘೋಷಣೆ ಆಗಿಲ್ಲ. ಆದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮೊನ್ನೆ ಶಿವರಾತ್ರಿ ದಿನದಂದು ಮತ್ತೀಕೆರೆಯ ಜೆಪಿ ಪಾರ್ಕ್​ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಂಜುನಾಥ್ ಅವರು ವೇದಿಕೆ ಮೇಲೆ ಕಾಣಿಸಿಕೊಂಡಿದ್ದರು. ಅಲ್ಲದೇ ಇಂದು ಸಂಜೆ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!