ಹೊಸದಿಗಂತ ವರದಿ,ಮಂಗಳೂರು:
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘ ಚಾಲಕ್ ಡಾ.ಮೋಹನ್ ಭಾಗವತ್ ಅವರು ಶುಕ್ರವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ. ನಾಳೆ (ಡಿ.7) ಸಂಜೆ 5.30ಕ್ಕೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಜೆ 6 ಗಂಟೆಯ ವೇಳೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋಹನ್ ಭಾಗವತ್ ಅವರನ್ನು ಸಂಘದ ಪ್ರಾಂತ ಪ್ರಚಾರಕರಾದ ಗುರುಪ್ರಸಾದ್, ಪ್ರಾಂತ ಸಹ ಕಾರ್ಯವಾಹ ಪಿ.ಎಸ್.ಪ್ರಕಾಶ್ ಮತ್ತಿತರ ಹಿರಿಯರು ಆತ್ಮೀಯವಾಗಿ ಬರಮಾಡಿಕೊಂಡರು.
ಬಳಿಕ ಝಡ್ ಪ್ಲಸ್ ಭದ್ರತೆಯೊಂದಿಗೆ ಅವರು ಮಂಗಳೂರಿನ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನಕ್ಕೆ ಆಗಮಿಸಿದ್ದು, ಸಂಘದ ಹಿರಿಯರೊಂದಿಗೆ ಮಾತುಕತೆ ನಡೆಸಿದರು.