ಹೊಸದಿಗಂತ ವರದಿ, ಮಂಡ್ಯ :
ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿ ಡಾ. ಎನ್.ಎಸ್. ಇಂದ್ರೇಶ್ ಅವರು ಎರಡನೇ ಬಾರಿಗೆ ಪುನರಾಯ್ಕೆಯಾಗಿದ್ದು, ಯಾವುದೇ ಭಿನ್ನಮತಕ್ಕೆ ಅವಕಾಶವಿಲ್ಲದಂತೆ ಮುಖಂಡರು, ಕಾರ್ಯಕರ್ತರ ಸರ್ವಾನುಮತದಿಂದ ಮೂರು ವರ್ಷಗಳ ಅವಧಿಗೆ ಆಯ್ಕೆ ಯಾಗಿದ್ದಾರೆ ಎಂದು ಚುನಾಣಾಧಿಕಾರಿ ಫಣೀಶ್ ತಿಳಿಸಿದರು.
ನಗರದ ಬಿಜೆಪಿ ವಿಕಾಸ ಭವನದಲ್ಲಿ ನಡೆದ ಸಭೆಯಲ್ಲಿ ಫಣೀಶ್ ಅವರು ಡಾ. ಇಂದ್ರೇಶ್ ಅವರ ಆಯ್ಕೆಯನ್ನು ಘೋಷಿಸಿ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
ಎರಡನೇ ಬಾರಿಗೆ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಾ. ಎನ್.ಎಸ್. ಇಂದ್ರೇಶ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಕಾರ‌್ಯಗಳನ್ನು ಮೆಚ್ಚಿ ನಾನು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡೆ. ಪಕ್ಷ ನನ್ನನ್ನು ಗುರುತಿಸಿ ಮೊದಲ ಬಾರಿಗೆ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿತ್ತು ಇದು ಪಕ್ಷ ನೀಡಿದ ಕೊಡುಗೆಯಾಗಿದೆ ಎಂದು ಹೇಳಿದರು.