ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಾ. ರವೀಂದ್ರನಾಥ್ ಅವರನ್ನು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಡಾ. ಸಿ.ಎನ್. ಮಂಜುನಾಥ್ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಡಾ. ರವೀಂದ್ರನಾಥ್ ಅವರನ್ನು ಪ್ರಭಾರ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿಎನ್ ಮಂಜುನಾಥ್ ಅವರು. ಇಂತಹ ಅವರು ಇಂದು ತಮ್ಮ ಸೇವೆಯಿಂದ ನಿವೃತ್ತರಾಗಿದ್ದಾರೆ.
ಕಳೆದ 16 ವರ್ಷಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಸೇವೆಸಲ್ಲಿಸಿದ್ದಂತ ಅವರು, 75 ಲಕ್ಷ ಜನರಿಗೆ ಹೃದ್ರೋಗ ಚಿಕಿತ್ಸೆ, 8 ಲಕ್ಷ ಜನರಿಗೆ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದ್ದರು.
ಇದೀಗ ಡಾ.ಸಿಎನ್ ಮಂಜುನಾಥ್ ಅವರು ನಿವೃತ್ತರಾದ ನಂತ್ರ, ಜಯದೇವ ಹೃದ್ರೋಗ ಸಂಸ್ಥೆಗೆ ಪ್ರಭಾರ ನಿರ್ದೇಶಕರನ್ನಾಗಿ 69 ವರ್ಷದ ಡಾ.ರವೀಂದ್ರನಾಥ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.