ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಸಾವಿನ ಹಿನ್ನೆಲೆಯಲ್ಲಿ ದೇಶಾದ್ಯಂತ 7 ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಮನರಂಜನಾ ಕಾರ್ಯಕ್ರಮಗಳನ್ನೂ ರದ್ದುಗೊಳಿಸಲಾಗಿದೆ. ಈ ಸಂದರ್ಭ ರಾಹುಲ್ ಗಾಂಧಿ ವಿಯೆಟ್ನಾಂ ಪ್ರವಾಸಕ್ಕೆ ಹೊರಟು ನಿಂತಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ರಾಹುಲ್ ಗಾಂಧಿ ವಿಯೆಟ್ನಾಂ ಪ್ರವಾಸಕ್ಕೆ ತೆರಳುವುದನ್ನು ಬಿಜೆಪಿ ಟೀಕಿಸಿದೆ.
ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾಎಕ್ಸ್ ಪೋಸ್ಟ್‌ನಲ್ಲಿ ರಾಹುಲ್ ಗಾಂಧಿಯನ್ನು ಸಂವೇದನಾಶೀಲತೆಯಿಲ್ಲದ ವ್ಯಕ್ತಿ ಎಂದು ಟೀಕಿಸಿದ್ದಾರೆ. ‘ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ದೇಶ ಶೋಕಿಸುತ್ತಿರುವಾಗ, ರಾಹುಲ್ ಗಾಂಧಿ ಹೊಸ ವರ್ಷವನ್ನು ಆಚರಿಸಲು ವಿಯೆಟ್ನಾಂಗೆ ಹಾರಿದ್ದಾರೆ’ ಎಂದು ಹೇಳಿದ್ದಾರೆ.
ಆಪರೇಷನ್ ಬ್ಲೂ ಸ್ಟಾರ್ ನ್ನು ಉಲ್ಲೇಖಿಸಿ ತರಾಟೆಗೆ ತೆಗೆದುಕೊಂಡ ಮಾಳವಿಯಾ, “ಗಾಂಧಿಗಳು ಮತ್ತು ಕಾಂಗ್ರೆಸ್ ಸಿಖ್ಖರನ್ನು ದ್ವೇಷಿಸುತ್ತವೆ. ಇಂದಿರಾ ಗಾಂಧಿಯವರು ದರ್ಬಾರ್ ಸಾಹಿಬ್ ನ್ನು ಅಪವಿತ್ರಗೊಳಿಸಿದ್ದಾರೆ ಎಂಬುದನ್ನು ಎಂದಿಗೂ ಮರೆಯಬೇಡಿ” ಎಂದು ಹೇಳಿದ್ದಾರೆ.
ಇದಕ್ಕೆ ತಕ್ಕ ಉತ್ತರ ನೀಡಿದ ಕಾಂಗ್ರೆಸ್, ಹಿರಿಯ ನಾಯಕ ಮಾಣಿಕಂ ಠಾಗೋರ್ ಬಿಜೆಪಿಯು ದಿಕ್ಕುತಪ್ಪಿಸುವ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಖಾಸಗಿಯಾಗಿ ಪ್ರಯಾಣಿಸಿದರೆ, ಅದು ನಿಮಗೆ ಏಕೆ ತೊಂದರೆ ಕೊಡುತ್ತದೆ? ಹೊಸ ವರ್ಷದಲ್ಲಿ ಆರೋಗ್ಯ ಸರಿಮಾಡಿಕೊಳ್ಳಿ ಎಂದು ಬಿಜೆಪಿ ಬಗ್ಗೆ ಟಾಗೂರ್ ವ್ಯಂಗ್ಯವಾಡಿದ್ದಾರೆ.