ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದು ಅಸಭ್ಯವಾಗಿ ವರ್ತಿಸುತ್ತಿದ್ದ ವೈದ್ಯಾಧಿಕಾರಿ ಒಬ್ಬರನ್ನು ಅಮಾನತು ಮಾಡಲಾಗಿದೆ.
ಸಿರಗುಪ್ಪ ತಾಲೂಕು ವೈದ್ಯಾಧಿಕಾರಿ ಈರಣ್ಣ ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ವೈದ್ಯ ಈರಣ್ಣ ಅವರು ಆಸ್ಪತ್ರೆಗೆ ಕುಡಿದು ಬಂದು ಸಿಬ್ಬಂದಿ ಮತ್ತು ಸಾರ್ವಜನಿಕರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದರು.
ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದು ಅಸಭ್ಯವಾಗಿ ನಡೆದುಕೊಂಡಿರುವ ಕಾರಣ ವೈದ್ಯಾಧಿಕಾರಿ ಈರಣ್ಣನ ಕರ್ತವ್ಯ ಲೋಪ ಹಾಗೂ ದುರ್ನಡತೆಯ ಆಧಾರದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.