ಡಾ.ಶಿವಕುಮಾರ ಸ್ವಾಮೀಜಿ 117ನೇ ಜನ್ಮದಿನ: ಕನ್ನಡದಲ್ಲಿಯೇ ನಮನ ಸಲ್ಲಿಸಿದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ 117 ನೇ ಜಯಂತಿ. ಶಿವಕುಮಾರ ಶ್ರೀಗಳ ಜಯಂತಿಯಂದು ಪ್ರಧಾನಿ ಮೋದಿ ಕನ್ನಡದಲ್ಲಿಯೇ ಟ್ವೀಟ್‌ ಮಾಡಿ ನಮನ ಸಲ್ಲಿಸಿದ್ದಾರೆ.

ಪರಮಪೂಜ್ಯ ಡಾ. ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ ಮಾನವೀಯ ಸೇವೆಗೆ ಅತ್ಯುನ್ನತ ಉದಾಹರಣೆಯಾಗಿದೆ. ನಮ್ಮ ಸಮಾಜದ ಕುರಿತಾಗಿ ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ ಎಂದು ಪ್ರಧಾನಿ ಟ್ವೀಟ್‌ ಮೂಲಕ ನಮನ ಸಲ್ಲಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಈ ಬಾರಿ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!