spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯ ಮಟ್ಟದ ಹೆಚ್.ಎನ್.ಪ್ರಶಸ್ತಿಗೆ ಡಾ.ಶಿವಮೂರ್ತಿ ಮುರುಘಾ ಶರಣರು ಆಯ್ಕೆ

- Advertisement -Nitte

ಹೊಸದಿಗಂತ ವರದಿ, ಚಿತ್ರದುರ್ಗ:

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ರಾಜ್ಯ ಮಟ್ಟದ ಹೆಚ್.ಎನ್.ಪ್ರಶಸ್ತಿಗೆ ಮುರುಘಾಮಠದ ಡಾ.ಶಿವಮೂರ್ತಿ ಶರಣರನ್ನು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ಮೌಢ್ಯದ ವಿರುದ್ದ ಜನತೆಯಲ್ಲಿ ಜಾಗೃತಿ ಮೂಡಿಸುತ್ತಿರುವ ಮುರುಘಾ ಶರಣರು ಅಮಾವಾಸೆಯಲ್ಲಿ ವಿವಾಹ, ಗ್ರಹಣದಲ್ಲಿ ಉಪಹಾರ ಸೇವನೆ, ಸ್ಮಶಾನಗಳಲ್ಲಿನ ಮೂಢನಂಬಿಕೆಗೆ ಕಡಿವಾಣ ಹಾಕುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿರುವುದರಿಂದ ರಾಜ್ಯ ಮಟ್ಟದ ಹೆಚ್.ಎನ್.ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ವೈಜ್ಞಾನಿಕ ಸಂಶೋಧನಾ ಪರಿಷತ್‌ನ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ನೇತೃತ್ವದಲ್ಲಿ ಮುರುಘಾಮಠಕ್ಕೆ ತೆರಳಿ ಡಿ.೨೮ ಮತ್ತು ೨೯ ರಂದು ನಡೆಯಲಿರುವ ರಾಜ್ಯ ಮಟ್ಟದ ವಿಚಾರ ಗೋಷ್ಟಿಯಲ್ಲಿ ಪ್ರಶಸ್ತಿ ಸ್ವೀಕರಿಸುವಂತೆ ಮುರುಘಾಶರಣರನ್ನು ಆಹ್ವಾನಿಸಿದರು.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಕಾರ್ಯದರ್ಶಿ ಪಿ.ಲೋಕೇಶ್, ಜಿಲ್ಲಾಧ್ಯಕ್ಷ ನಾಗರಾಜ್ ಸಂಗಂ, ಪದಾಧಿಕಾರಿಗಳಾದ ಎಂ.ರಂಗಪ್ಪ, ಲವಕುಮಾರ್, ಖಜಾಂಚಿ ಬಿ.ಎ.ಬಸವರಾಜ್ ಈ ಸಂದರ್ಭದಲ್ಲಿ ಹಾಜರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss