ಡಾ. ಮೋಹನ್ ಆಳ್ವ ನೇತೃತ್ವದ ತುಳು ಭಾಷೆ ಸಮಿತಿ ರಚನೆಗೆ ರಾಜ್ಯ ಸರ್ಕಾರ ನಿರ್ದೇಶನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : 

ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂಬ ತುಳುವರ ಬೇಡಿಕೆಗೆ ರಾಜ್ಯ ಸರಕಾರ ಸ್ಪಂದಿಸಿದ್ದು, ಈ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಸಮಿತಿ ರಚಿಸಿದೆ.

ತುಳು ಭಾಷೆಯನ್ನು ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಡಾ. ಎಂ. ಮೋಹನ ಆಳ್ವ ಅವರ ಅಧ್ಯಕ್ಷತೆಯಲ್ಲಿ 8 ಮಂದಿ ಅಧಿಕಾರಿ/ ಅಧಿಕಾರೇತರ ಸದಸ್ಯರನ್ನು ಒಳಗೊಂಡ ಸಮಿತಿ ರಚಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಕೆ.ಆರ್. ರಮೇಶ್ ಆದೇಶ ಹೊರಡಿಸಿದ್ದಾರೆ.

ಸಮಿತಿಯಲ್ಲಿ ಕೇಶವ ಬಂಗೇರ, ಡಾ. ಮಾಧವ ಕೊಣಾಜೆ, ಗಣೇಶ್ ಅಮೀನ್ ಸಂಕಮಾರ್, ಪೃಥ್ವಿರಾಜ್ ಕವತ್ತಾರು ಮಣಿಪಾಲ, ವಸಂತ ಶೆಟ್ಟಿ ಉಡುಪಿ, ಚಂದ್ರಹಾಸ ಕಣಂತೂರು, ಸಂಧ್ಯಾ ಆಳ್ವ ಸದಸ್ಯರಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ. ಸಮಿತಿಯು ಅಧ್ಯಯನ ನಡೆಸಿ, ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಘೋಷಿಸುವ ಕುರಿತು ವಾರದೊಳಗೆ ಸರಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!