ರಾಜ್ಯಸಭೆಗೆ ಡಾ ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ: ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಧರ್ಮಸ್ಧಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ʼನಲ್ಲಿ ಅಭಿನಂದಿಸಿದ್ದಾರೆ.

ಅದ್ರಲ್ಲೂ ವಿಶೇಷವಾಗಿ ಧರ್ಮಸ್ಧಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅವರಿಗೆ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ್ದಾರೆ.

 

‘ಸಮುದಾಯಕ್ಕೆ ಮಹೋನ್ನತ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಶ್ರೀವೀರೇಂದ್ರ ಹೆಗ್ಗಡೆಯವರು ಮುಂಚೂಣಿಯಲ್ಲಿದ್ದಾರೆ.ಧರ್ಮಸ್ಥಳದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ಅವಕಾಶ ಹಾಗು ಅವರು ಆರೋಗ್ಯ,ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೈಗೊಂಡಿರುವ ಮಹತ್ತರ ಕಾರ್ಯಗಳಿಗೆ ಸಾಕ್ಷಿಯಾಗುವ ಅವಕಾಶ ನನಗೆ ಒದಗಿತ್ತು. ಖಂಡಿತವಾಗಿ ಅವರು ಸಂಸದೀಯ ನಡಾವಳಿಗಳನ್ನ ಮತ್ತಷ್ಟು ಉತ್ಕೃಷ್ಟಗೊಳಿಸುವರು’ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!