ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದ ಲೆಜೆಂಡರಿ ಕಲಾವಿದರಾದ ಡಾ. ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ವಿಷ್ಣುವರ್ಧನ್ ಅವರು ಅಭಿಮಾನಿಗಳನ್ನು ರಂಜಿಸಿದ್ದರು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ. ಅದೇ ರೀತಿ ಬಿ. ಸರೋಜಾದೇವಿ ಕೂಡ ಚಿತ್ರರಂಗದಲ್ಲಿ ಸಾಧನೆ ಮಾಡಿದ್ದರು. ಇದೀಗ ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ನೀಡಬೇಕು ಎಂಬುದು ಕುಟುಂಬದವರ ಮತ್ತು ಅಭಿಮಾನಿಗಳ ಮನವಿ ಆಗಿತ್ತು. ಹಾಗಾಗಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ.