ಕಿಮ್ಸ್ ಆಸ್ಪತ್ರೆಯ ಶವಾಗಾರ ಬಳಿ ಹೈಡ್ರಾಮಾ: ಪರಿಹಾರ ಧನಕ್ಕಾಗಿ ಇಬ್ಬರು ಹೆಂಡಿರ ಬಡಿದಾಟ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಿಲಿಂಡರ್​​ ಸ್ಫೋಟದಿಂದ ಮೃತಪಟ್ಟ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಕುಟುಂಬದವರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

ಮೃತ ನಿಜಲಿಂಗಪ್ಪ ಬೇಪುರಿ, ಸಂಜಯ್​​ ಸವದತ್ತಿ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್​ ಲಾಡ್ ಗುರುವಾರ ಘೋಷಣೆ ಮಾಡಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶವಾಗಾರ ಬಳಿ ಹೈಡ್ರಾಮಾ ನಡೆದಿದೆ. ಮೃತ ನಿಜಲಿಂಗಪ್ಪನ ಶವಕ್ಕಾಗಿ ಇಬ್ಬರು ಹೆಂಡಿರು ಜಗಳವಾಡಿಕೊಂಡಿದ್ದಾರೆ. ನಿಜಲಿಂಗಪ್ಪ ಅವರ ಮೊದಲ ಮತ್ತು ಎರಡನೇ ಹೆಂಡತಿ ಜಗಳವಾಡಿದ್ದು, ತನ್ನ ಮನೆ ಬಳಿ ಪೂಜೆ ಮಾಡಲು ಮೊದಲು ಅವಕಾಶ ಮಾಡುವಂತೆ ಎರಡನೇ ಹೆಂಡತಿ ಆಗ್ರಹಿಸಿದ್ದಾರೆ. ಇಷ್ಟೇ ಅಲ್ಲದೆ, ಶವವನ್ನು ವಾಪಸ್ ಶವಾಗಾರಕ್ಕೆ ತಂದಿದ್ದಾರೆ.

ಎರಡನೇ ಹೆಂಡತಿ ಶಾಂತ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ನನ್ನ ಮನೆಗೆ ಮೊದಲು ಕರೆದುಕೊಂಡು ಹೋಗುತ್ತೇನೆ ಅಂತ ಹೇಳಿದ್ದಿರಿ. ಆದರೆ ಈಗ ಮೊದಲ ಹೆಂಡತಿ ಮನೆಗೆ ಕರೆದೊಯ್ಯುತ್ತಿದ್ದೀರಿ ಎಂದು ಕಿಡಿ ಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!