ಮಹಾ ಕುಂಭಮೇಳದಲ್ಲಿ ದ್ರೌಪದಿ ಮುರ್ಮು ಪುಣ್ಯಸ್ನಾನ, ಒಳಿತಿಗಾಗಿ ಪ್ರಾರ್ಥನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡ ರಾಷ್ಟ್ರಪತಿ ದ್ರೌಪದಿ ಮುರ್ಮು  ಅವರಿಂದು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.

ಪ್ರಯಾಗ್‌ರಾಜ್‌ಗೆ ಬಂದಿಳಿದ  ದ್ರೌಪದಿ ಮುರ್ಮು ಅವರನ್ನು ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಬರಮಾಡಿಕೊಂಡರು.

ರಾಷ್ಟçಪತಿ ದ್ರೌಪದಿ ಮುರ್ಮು 8 ಗಂಟೆಗಳ ಕಾಲ ಪ್ರಯಾಗ್‌ರಾಜ್‌ನಲ್ಲಿ ಸಮಯ ಕಳೆಯಲಿದ್ದಾರೆ. ಅಕ್ಷಯವತ್ ಹಾಗೂ ಹನುಮಾನ್ ಮಂದಿರಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಡಿಜಿಟಲ್ ಕುಂಭ ಅನುಭವ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!