ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಪೈಲಟ್ ರಹಿತ ಲಘು ವಿಮಾನ ಚಿತ್ರದುರ್ಗದಲ್ಲಿ ಭಾನುವಾರ ಬೆಳಿಗ್ಗೆ ಪತನಗೊಂಡಿದೆ.
ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಪೈಲಟ್ ರಹಿತ ಲಘುವಿಮಾನವು ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ಸಿದ್ದಪ್ಪ ಎಂಬುವರ ಜಮೀನಿನಲ್ಲಿ ಪತನಗೊಂಡಿದ್ದು, ಅದನ್ನು ನೋಡಲು ಜನ ಮುಗಿಬಿದ್ದಿದ್ದಾರೆ.
ಚಳ್ಳಕೆರೆ ತಾಲ್ಲೂಕು ಕುದಾಪುರ ಬಳಿಯಿರುವ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಸಿದ್ಧಪಡಿಸಿದ್ಧ ಯುದ್ಧ ವಿಮಾನ ಕುದಾಪುರ ವಾಯು ನೆಲೆಯಿಂದ ಭಾನುವಾರ ಬೆಳಿಗ್ಗೆ ಹಾರಾಟ ಆರಂಭಿಸಿತ್ತು.
ಈ ವೇಳೆ ವದ್ದಿಕೆರೆ ಬಳಿ ನಿಯಂತ್ರಣ ತಪ್ಪಿ ಸಿದ್ದಪ್ಪ ಎಂಬುವವರ ಜಮೀನಿಲ್ಲಿ ಪತನವಾಗಿದೆ. ಇದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ವಿಮಾನ ಪತನವಾಗಲು ಇದುವರೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ವಿಮಾನ ಪತನವಾದ ಸ್ಥಳಕ್ಕೆ ಡಿಆರ್‌ಡಿಒ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.