Tuesday, August 16, 2022

Latest Posts

ಕುವೆಂಪು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಡಿಆರ್ ಡಿಓ ತಂಡ

ಹೊಸ ದಿಗಂತ ವರದಿ, ಶಿವಮೊಗ್ಗ:

ಡಿಆರ್ ಡಿಓ ತಂಡ ಬುಧವಾರ ಕುವೆಂಪು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಸಂಶೋಧನಾ ಕೇಂದ್ರ ಸ್ಥಾಪಿಸುವ ಸಲುವಾಗಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದೆ.
ಡಿಜಿ ಎ.ಕೆ. ಸಿಂಗ್ ನೇತೃತ್ವದ ನಾಲ್ವರ ತಂಡ ಮಧ್ಯಹ್ನ ಶಂಕರಘಟ್ಟದ ಜ್ಞಾನ ಸಹ್ಯಾದ್ರಿಗೆ ಆಗಮಿಸಿದೆ. ಬಳಿಕ ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜಿಗೂ ಭೇಟಿ ನೀಡಿ ಕೇಂದ್ರ ಆರಂಭಿಸುವ ಬಗ್ಗೆ ಸಮಾಲೋಚನೆ ನಡೆಸಲಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss