Sunday, August 14, 2022

Latest Posts

ಭೀಕರ ರಸ್ತೆ ಅಪಘಾತ: ಮಗು ಸೇರಿ ಒಂದೇ ಕುಟುಂಬದ 8 ಮಂದಿ ಸಾವು

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್ ಗಢ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಗು ಸೇರಿ ಒಂದೇ ಕುಟುಂಬದ ಎಂಟು ಮಂದಿ ಮೃತಪಟ್ಟಿದ್ದಾರೆ.

ಕೆಎಂಪಿ ಎಕ್ಸ್‌ಪ್ರೆಸ್‌ವೇ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.  ವೇಗವಾಗಿ ಬರುತ್ತಿದ್ದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಉತ್ತರ ಪ್ರದೇಶದ ಕಡೆ ಹೊರಟಿದ್ದ ಕಾರಿನಲ್ಲಿ ಒಟ್ಟು 11 ಮಂದಿ ಇದ್ದು, 8 ಮಂದಿ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು,ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss