ಮಲೆನಾಡಿಗರ ಕನಸು ಶಿವಮೊಗ್ಗ ಏರ್‌ಪೋರ್ಟ್ ಉದ್ಘಾಟನೆ : ಇದರ ವಿಶೇಷತೆ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಮಲೆನಾಡಿಗರ ಸಾಕಷ್ಟು ವರ್ಷದ ಕನಸು ನನಸಾಗುತ್ತಿರುವ ದಿನ, ಶಿವಮೊಗ್ಗ ಏರ್‌ಪೋರ್ಟ್ ಉದ್ಘಾನಟೆಯಾಗುತ್ತಿದ್ದು, ಪ್ರಧಾನಿ ಮೋದಿ ವಿಮಾನದಲ್ಲಿ ಆಗಮಿಸುವ ಪ್ರಥಮ ಪ್ರಯಾಣಿಕರಾಗಿದ್ದಾರೆ .

ವಿಮಾನದ ಮೂಲಕ ಬಂದಿಳಿದು ಮಲೆನಾಡ ಏರ್‌ಪೋರ್ಟ್ ಉದ್ಘಾಟನೆ ಮಾಡಲಿದ್ದಾರೆ. ಇಲ್ಲಿ ಇನ್ನೊಂದು ವಿಶೇಷತೆ ಇದೆ, ಇಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನ. ಹೌದು, ಶಿವಮೊಗ್ಗಕ್ಕೆ ಏರ್‌ಪೋರ್ಟ್ ಬೇಕು ಎಂದು ಸಾಕಷ್ಟು ಪ್ರಯತ್ನಪಟ್ಟು ಕನಸಿನ ಕೂಸಿನಂತೆ ಸಲಹಿದ್ದು, ಬಿಎಸ್‌ವೈ. ಬಿಎಸ್‌ವೈ ಜನ್ಮದಿನದಂದೇ ಏರ್‌ಪೋರ್ಟ್ ಉದ್ಘಾಟನೆಯಾಗುತ್ತಿರುವುದು ಮತ್ತೊಂದು ವಿಶೇಷತೆಯಾಗಿದೆ.

ಇಂದು ಬೆಳಗ್ಗೆ 11:30 ಕ್ಕೆ ಶಿವಮೊಗ್ಗ ಏರ್‌ಪೋರ್ಟ್‌ಗೆ ಪ್ರಧಾನಿ ಮೋದಿ ಬಂದಿಳಿಯಲಿದ್ದಾರೆ. 11:45ರಿಂದ 11:55 ವರೆಗೆ ಟರ್ಮಿನಲ್ ವೀಕ್ಷಣೆ ಮಾಡಲಿದ್ದಾರೆ. ಮಧ್ಯಾಹ್ನ 12 ರಿಂದ 1:15ರವರೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಿ ಕಾಮಗಾರಿಗಳ ಉದ್ಘಾಟನೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ 1:30 ಕ್ಕೆ ಶಿವಮೊಗ್ಗದಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣ ವಿಶೇಷತೆ ಏನು?

  • 775 ಎಕರೆ ಭೂಮಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ
  • ಶಿವಮೊಗ್ಗದ ಸೋಗಾನೆ ಗ್ರಾಮದ ಬಳಿ ನಿರ್ಮಾಣವಾಗಿರುವ ಏರ್‌ಪೋರ್ಟ್‌ನ ವೆಚ್ಚ ಬರೋಬ್ಬರಿ 384 ಕೋಟಿ ರೂಪಾಯಿ.
  • ಶಿವಮೊಗ್ಗ ವಿಮಾನ ನಿಲ್ದಾಣ ಕರ್ನಾಟಕದ ಅತಿ ದೊಡ್ಡ ರನ್‌ವೇ ಹೊಂದಿರುವ ಎರಡನೇ ವಿಮಾನ ನಿಲ್ದಾಣ ಆಗಲಿದೆ. 3,200 ಮೀಟರ್ ಉದ್ದದ ರನ್‌ವೇ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ.
  • ಗಂಟೆಗೆ ಸುಮಾರು 300 ಪ್ರಯಾಣಿಕರನ್ನು ನಿಭಾಯಿಸುವಷ್ಟು ಪ್ಯಾಸೆಂಜರ್ ಟರ್ಮಿನಲ್ ಕಟ್ಟಡ ಸುಸಜ್ಜಿತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!