ಹೊರನಾಡು ದೇಗುಲದಲ್ಲಿ ವಸ್ತ್ರಸಂಹಿತೆ ಜಾರಿ: ದೇವರ ದರುಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಚಿಕ್ಕಮಗಳೂರಿನ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ದೇವರ ದರುಶನಕ್ಕೆ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯಗೊಳಿಸಲಾಗಿದೆ.

ಗಂಡಸರು ಶಲ್ಯ, ಪ್ಯಾಂಟ್, ಪಂಚೆ ಧರಿಸಬೇಕು. ಹೆಣ್ಣು ಮಕ್ಕಳು ಸೀರೆ ಹಾಗೂ ಚೂಡಿದಾರ ಧರಿಸುವಂತೆ ದೇವಾಲಯದ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ ಎಂದು ಆಡಳಿತ ಮಂಡಳಿ ಸೂಚನೆ ನೀಡಿದೆ. ಭಕ್ತರು ಸಹಕರಿಸುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!