ತುಳಜಾ ಭವಾನಿ ದೇವಸ್ಥಾನದಲ್ಲಿ ಭಕ್ತರಿಗೆ ಡ್ರೆಸ್​ ಕೋಡ್​ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ತುಳಜಾ ಭವಾನಿ ದೇವಸ್ಥಾನದಲ್ಲಿ ಭಾರತೀಯ ಸಂಸ್ಕೃತಿ ಮತ್ತು ನಾಗರಿಕತೆಯ ಅರಿವನ್ನು ಕಾಪಾಡಿಕೊಳ್ಳಲು ಆಡಳಿತ ಮಂಡಳಿ ಮನವಿ ಮಾಡಿದ್ದು, ಪಾಶ್ಚಿಮಾತ್ಯ ಉಡುಪುಗಳನ್ನು ನಿಷೇಧಿಸಲು ದೇವಸ್ಥಾನ ಆಡಳಿತ ಮಂಡಳಿ ನಿರ್ಧರಿಸಿದೆ.

ಇಂದಿನಿಂದ ದೇವಸ್ಥಾನದಲ್ಲಿ ಅಸಭ್ಯ ಬಟ್ಟೆ ಧರಿಸಿ ಬರುವವರಿಗೆ ದೇಗುಲ ಪ್ರವೇಶವಿಲ್ಲ ಎಂಬ ಬೋರ್ಡ್ ಹಾಕಲಾಗಿದೆ. ಅಕ್ಟೋಬರ್ 2018 ರಲ್ಲಿ ನವರಾತ್ರಿ ಸಂದರ್ಭ ಕೊಲ್ಲಾಪುರ ಮಹಾಲಕ್ಷ್ಮಿ ದೇವಸ್ಥಾನದ ಬಗ್ಗೆ ಇದೇ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶಿರಸಿಯಲ್ಲೂ ಇಂತಹ ಫಲಕಗಳನ್ನು ಅಳವಡಿಸಲಾಗಿತ್ತು. ಆದರೆ ಸಾರ್ವಜನಿಕರ ವಿರೋಧದ ನಂತರ ಈ ಬೋರ್ಡ್‌ಗಳನ್ನು ತೆಗೆದುಹಾಕಲಾಯಿತು.

ಬರ್ಮುಡಾ ಶಾರ್ಟ್ಸ್, ಹಾಫ್ ಪ್ಯಾಂಟ್, ಪ್ರಚೋದನಕಾರಿ ಬಟ್ಟೆ ಮತ್ತು ಬಹಿರಂಗ ಬಟ್ಟೆಗಳನ್ನು ಧರಿಸಿರುವ ಭಕ್ತರನ್ನು ದೇವಾಲಯದ ಒಳಗೆ ಅನುಮತಿಸಲಾಗುವುದಿಲ್ಲ. ಮಹಿಳೆಯರು ಒನ್ ಪೀಸ್, ಶಾರ್ಟ್ ಸ್ಕರ್ಟ್, ಶಾರ್ಟ್ ಪ್ಯಾಂಟ್ ಧರಿಸಿ ದೇವಸ್ಥಾನ ಪ್ರವೇಶಿಸುವಂತಿಲ್ಲ. ಪುರುಷರು ಕೂಡ ಚಿಕ್ಕ ಪ್ಯಾಂಟ್ ಧರಿಸುವಂತಿಲ್ಲ ಎಂದು ವಿಷಯ ಫಲಕ ಹಾಕಲಾಗಿದೆ.

ಲ್ಮಾನ್, ತನ್ನ ಭುಜ ಮತ್ತು ಬೆನ್ನಿನ ಮೇಲೆ ಬ್ಯಾಂಡೇಜ್ ಹಾಕಿಕೊಂಡಿರುವುದು ಕಂಡು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!