ಲವಂಗದ ನೀರನ್ನು ನಿಮಯಮಿತವಾಗಿ ಸೇವನೆ ಮಾಡುವುದರಿಂದ ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದಾಗಿದೆ. ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಸಮಸ್ಯೆ ಹಾಗೂ ಅಜೀರ್ಣ ಕಡಿಮೆ ಮಾಡುತ್ತದೆ. ಲವಂಗದ ನೀರು ತೇಗುವಿಕೆ ಮತ್ತು ಗ್ಯಾಸ್ಟ್ರಿಕ್ ತೊಂದರೆಗಳಿಗೆ ನೈಸರ್ಗಿಕವಾಗಿ ಪರಿಹಾರ ಒದಗಿಸುತ್ತದೆ.
ಲವಂಗದ ನೀರು ನಿಮ್ಮ ಚಯಾಪಚಯ ಕ್ರಿಯೆಗೆ ಅಗತ್ಯವಾದ ರಸಗಳನ್ನು ಬಿಡುಗಡೆ ಮಾಡಲು ಸಹಾಯ ಮಾಡುತ್ತದೆ. ಇದರ ಸಕ್ರಿಯ ಸಂಯುಕ್ತವಾದ ಯುಜೆನಾಲ್, ಕೊಬ್ಬಿನ ಚಯಾಪಚಯ ಕ್ರಿಯೆ ಸುಧಾರಿಸುತ್ತದೆ. ಇದು ದೈನಂದಿನ ತೂಕ ನಿರ್ವಹಣೆಯಲ್ಲಿ ಹೆಚ್ಚು ಸಹಾಯಕವಾಗಿದೆ.
ನಿಮ್ಮ ರಕ್ತದಲ್ಲಿನ ಶುಗರ್ ಲೆವಲ್ನ್ನು ನೈಸರ್ಗಿಕವಾಗಿ ನಿಯಂತ್ರಿಸಲು ನೀವು ಬಯಸಿದರೆ, ಲವಂಗದ ನೀರನ್ನು ಸೇವನೆ ಮಾಡಬಹುದು. ಲವಂಗದಲ್ಲಿರುವ ಯುಜೆನಾಲ್ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುತ್ತದೆ. ಒಟ್ಟಾರೆ ಚಯಾಪಚಯ ಆರೋಗ್ಯಕ್ಕೆ ಪೂರಕವಾಗಿ ಕಾರ್ಯನಿರ್ವಹಿಸುತ್ತದೆ.
ಲವಂಗದ ನೀರಿನಲ್ಲಿ ಹೆಚ್ಚಿನ ಪ್ರಮಾಣದ ಉತ್ಕರ್ಷಣ ನಿರೋಧಕಗಳು ಇರುವುದರಿಂದ, ನಿಮ್ಮ ರೋಗನಿರೋಧಕ ಶಕ್ತಿ ಬಲಪಡಿಸುತ್ತದೆ. ಸಾಮಾನ್ಯ ಸೋಂಕುಗಳು ಹಾಗೂ ರೋಗಗಳಿಂದ ನಿಮ್ಮನ್ನು ರಕ್ಷಿಸುತ್ತದೆ.
ಲವಂಗದ ನೀರಿನ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಬಾಯಿಯಲ್ಲಿ ಉರಿಯೂತ ಕಡಿಮೆ ಮಾಡುತ್ತದೆ. ಜೊತೆಗೆ ಬಾಯಿ ಮತ್ತು ಹಲ್ಲುಗಳ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ. ಲವಂಗದ ನೀರಿನಿಂದ ತೊಳೆಯುವುದು ಸಹ ನಿಮ್ಮ ಉಸಿರಾಟ ತಾಜಾ ಆಗಿಸುತ್ತದೆ.
ಲವಂಗದ ನೀರು ಉರಿಯೂತ ನಿವಾರಕ, ಆ್ಯಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿದೆ. ಜೊತೆಗೆ ಮೊಡವೆ ಉಂಟುಮಾಡುವ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಹಾಗೂ ಚರ್ಮದಲ್ಲಿ ಅಲ್ಲಲ್ಲಿ ಕೆಂಪಗಾಗುವುದನ್ನು ಕಡಿಮೆ ಮಾಡಲು ಹಾಗೂ ಕ್ಲೀನ್ ಆಗಿರುವ ಚರ್ಮ ಹೊಂದಲು ಸಹಾಯ ಮಾಡುತ್ತದೆ.
ಲವಂಗದ ನೀರಿನಲ್ಲಿನ ಉತ್ಕರ್ಷಣ ನಿರೋಧಕಗಳು ಚರ್ಮವನ್ನು ಮಂದವಾಗಿಸುವ ಹಾಗೂ ಅಕಾಲಿಕ ವಯಸ್ಸಾಗುವಂತೆ ಮಾಡುವ ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಹೋರಾಡುತ್ತವೆ. ಲವಂಗದ ನೀರನ್ನು ನಿಯಮಿತವಾಗಿ ಬಳಕೆ ಮಾಡುವುದರಿಂದ ನಿಮ್ಮ ಚರ್ಮವು ಕಾಂತಿಯುತ ಹಾಗೂ ಆರೋಗ್ಯಕರವಾಗಿರುತ್ತದೆ.