ಆರೋಗ್ಯದಲ್ಲಿ ಏರುಪೇರು: ಕಲ್ಲಡ್ಕ ಡಾ. ಪ್ರಭಾಕರ ಭಟ್ ಆಸ್ಪತ್ರೆಗೆ ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರ ಆರೋಗ್ಯದಲ್ಲಿ ಮಂಗಳವಾರ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಾ. ಭಟ್ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಮಂಗಳವಾರ ಸಂಜೆಯ ವೇಳೆಗೆ ಸುಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಕ್ತದೊತ್ತಡ ಪರೀಕ್ಷೆಗಾಗಿ ಅವರು ನಗರ ಖಾಸಗಿ ಆಸ್ಪತೆಗೆ ಭೇಟಿ ನೀಡಿದ್ದರು. ಈ ಸಂದರ್ಭ ಪರೀಕ್ಷೆ ನಡೆಸಿದ ವೈದ್ಯರು ಯಾವುದೇ ಅಪಾಯವಿಲ್ಲ ಎಂದು ತಿಳಿಸಿದ್ದಾರೆ. ಆದರೂ, ಬುಧವಾರದ ತನಕ ನಿಗಾದಲ್ಲಿರುವಂತೆ ಸೂಚಿಸಲಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಪ್ತಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!