June 24, 2026
Wednesday, June 24, 2026
spot_img

ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ ಏರಿಕೆ, ಬಿಸಿಲಿನ ಎಫೆಕ್ಟ್‌ಗೆ ಜನ ಹೈರಾಣು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಬಿಸಿಲು ತೀವ್ರವಾಗುತ್ತಿದ್ದಂತೆಯೇ ಇತ್ತ ಕುಡಿಯುವ ನೀರಿನ ದರವೂ ಹೆಚ್ಚಿಗೆಯಾಗಿದೆ. ಬೆಂಗಳೂರಿನ ಹಲವು ಏರಿಯಾಗಳಲ್ಲಿ ಈ ಸಮಸ್ಯೆ ಎದುರಾಗಿದ್ದು, ಕುಡಿಯುವ ನೀರಿಗಾಗಿ ಹಾಹಾಕಾರ ಆರಂಭವಾಗಿದೆ.

ಪ್ರತಿ ಮೂರು ದಿನಗಳಿಗೊಮ್ಮೆ ಎರಡು ಗಂಟೆಗಳ ಕಾಲ ನೀರು ಬಿಡಲಾಗುತ್ತಿದೆ. ಇದು ಸಾಲುವುದಿಲ್ಲ. ದೂರ ದೂರದ ಏರಿಯಾಗಳಿಂದ ನೀರು ತಂದು ಜೀವನ ಮಾಡುವಂತಾಗಿದೆ ಎಂದು ಲಗ್ಗೆರೆ ಪ್ರದೇಶದ ಜನ ಹೇಳಿದ್ದಾರೆ.

ನೆಲಮಂಗಲದಲ್ಲಿ ನೀರಿನ ಅಸಮರ್ಪಕ ವಿತರಣೆ ಮತ್ತು ರಾಜಕೀಯದ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಜಕ್ಕಸಂದ್ರ ವಾರ್ಡ್‌ನಲ್ಲಿ ಹಣ ಕೊಟ್ಟವರಿಗೆ ಮಾತ್ರ ನೀರು ಪೂರೈಕೆ ಮಾಡಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಜನರು ಚರಂಡಿ ಪೈಪ್‌ಗಳಿಂದ ನೀರು ಹಿಡಿಯುವ ದುಸ್ಥಿತಿ ಎದುರಿಸುತ್ತಿದ್ದಾರೆ. ಉಡುಪಿ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಜೀವಜಲವಾಗಿದ್ದ ಸ್ವರ್ಣ ನದಿಯ ನೀರಿನ ಮಟ್ಟ ಕಳೆದ ವರ್ಷಕ್ಕಿಂತ ಒಂದು ಮೀಟರ್‌ನಷ್ಟು ಕುಸಿದಿದೆ.

ಸರ್ಕಾರ ಈ ಬಗ್ಗೆ ಗಮನಹರಿಸಿ ನಮಗೆ ಪರಿಹಾರ ನೀಡಬೇಕು, ನೀರಿಗಾಗಿಯೂ ಬೇಡುವಂಥ ಪರಿಸ್ಥಿತಿ ಬರುವ ಸಾಧ್ಯತೆಯಿದೆ ಎಂದು ಜನ ಎಚ್ಚರಿಕೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !