ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ್ದು, ಹನಿ, ತುಂತುರು ನೀರಾವರಿ ಘಟಕ ಅಳವಡಿಕೆ ಯೋಜನೆಗೆ 440 ಕೋಟಿ ಸಹಾಯಧನ ನೀಡುವುದಾಗಿ ಹೇಳಿದ್ದಾರೆ.
ರೈತ ಸಮೃದ್ಧಿ ಯೋಜನೆಯಡಿ 10 ಕೃಷಿ ಹವಾಮಾನ ವಲಯಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳ ಅಭಿವೃದ್ಧಿ ಮಾಡಲಾಗುವುದು, ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 428 ಕೋಟಿ ರೂ. ವೆಚ್ಚದಲ್ಲಿ 50 ಸಾವಿರ ರೈತರಿಗೆ ಸಹಾಯಧನ ಸೌಲಭ್ಯ ಕಲ್ಪಿಸುವುದು, ತೊಗರಿ ಉತ್ಪಾದನೆ ಉತ್ತೇಜನಕ್ಕೆ 88 ಕೋಟಿ ರೂ. ಒದಗಿಸಲಾಗುವುದು ಎಂದಿದ್ದಾರೆ.
ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ ಮಾಡಲಾಗುವುದು, ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ ಗುರಿ ಹೊಂದಲಾಗಿದೆ,ಬೆಳೆಗಳ ಕುರಿತು ನಿಖರ ತೀರ್ಮಾನ ಕೈಗೊಳ್ಳಲು ನೆರವು ನೀಡುವ ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ ಸ್ಥಾಪಿಸಲಾಗುವುದು ಎಂದಿದ್ದಾರೆ.