spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಲಬುರಗಿ| ಸೆ. 17ರಂದು ಗೋ ಶಾಲಾ ಲೋಕಾರ್ಪಣೆ

- Advertisement -Nitte

ಹೊಸ ದಿಗಂತ ವರದಿ, ಕಲಬುರಗಿ:

ಕಲ್ಯಾಣ ಕರ್ಣಾಟಕ ಪ್ರಾಣಿ ದಯಾ ಹಾಗೂ ಗೋ ಸೇವಾ ಸಂಸ್ಥೆ ಆಶ್ರಯದಲ್ಲಿ ಸೆ.17ರಂದು ಮಧ್ಯಾಹ್ನ 2ಕ್ಕೆ ಅವರಾದ(ಬಿ) ಗ್ರಾಮದ ಗೋ ಶಾಲಾ ಆವರಣದಲ್ಲಿ ಕಲ್ಯಾಣ ಕರ್ನಾಟಕ ಗೋ ಶಾಲಾ ಲೋಕಾರ್ಪಣೆ ಸಮಾರಂಭ ಜರುಗಲಿದೆ ಎಂದು ಕಲ್ಯಾಣ ಕರ್ನಾಟಕ ಪ್ರಾಣಿ ದಯಾ ಹಾಗೂ ಗೋ ಸೇವಾ ಸಂಸ್ಥೆಯ ಅಧ್ಯಕ್ಷ ಸಾದಿಕ್ ಅಲಿ ದೇಶಮುಖ ಹಾಗೂ ಕಾರ್ಯದರ್ಶಿ ಮಂಜುನಾಥ ನಾಲವಾರಕರ್ ತಿಳಿಸಿದರು.

ಶ್ರೀನಿವಾಸ ಸರಡಗಿಯ ಚಿಕ್ಕವೀರೇಶ್ವರ ಸಂಸ್ಥಾನದ ರೇವಣಸಿದ್ದ ಶಿವಾಚಾರ್ಯರು, ಕಂಬಳೇಶ್ವರ ಮಠದ ಸೋಮಶೇಖರ್ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಉದ್ಘಾಟಕರಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕøತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ್ ಸೇಡಂ, ಶಾಸಕ ಅಜಯಸಿಂಗ್, ಸಂಸದ ಡಾ.ಉಮೇಶ ಜಾಧವ, ಶಾಸಕ ಬಸವರಾಜ ಮತ್ತಿಮೂಡ್, ದತ್ತಾತ್ರೇಯ ಸಿ.ಪಾಟೀಲ್ ರೇವೂರ, ಎಂಎಲ್‍ಸಿ ಬಿ.ಜಿ.ಪಾಟೀಲ್, ಕ್ರೇಡಲ್ ಅಧ್ಯಕ್ಷ ಚಂದು ಪಾಟೀಲ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜಕುಮಾರ ಪಾಟೀಲ್ ತೇಲ್ಕೂರ್, ಮಾಜಿ ಎಂಎಲ್‍ಸಿ ಶಶೀಲ್ ನಮೋಶಿ, ಅಮರನಾಥ ಪಾಟೀಲ್, ಪ್ರಶಾಂತ ಮಾನಕರ್, ಶರಣು ಪಪ್ಪಾ, ನಿತೀನ್ ಗುತ್ತೇದಾರ್, ರವಿ ಬಿರಾದಾರ, ಸಂಗೀತಾ ಪಾಟೀಲ್ ಅವರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಲರಾಮ ರಾಠೋಡ, ಮಹೇಶ ಪಲನಿತಕರ್, ನಿತೀನ ರಾಮಪುರೆ, ಕೇಶವ ಚವ್ಹಾಣ ಇತರರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss