Saturday, August 13, 2022

Latest Posts

ಯೋಗಾಸನದ ಮೂಲಕ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಚಾಲನೆ

ಹೊಸದಿಗಂತ ವರದಿ, ಚಿಕ್ಕಬಳ್ಳಾಪುರ:

ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿಧುರಾಶ್ವತ್ಥದಲ್ಲಿ ಇಂದು ನಡೆಯಲಿರುವ 75ನೇ ವರ್ಷದ ಸ್ವಾತಂತ್ರ್ಯೊತ್ಸವದ ಅಜಾದ್ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಯೋಗಾಸನ ಮಾಡುವ ಮೂಲಕ ಚಾಲನೆ ದೊರೆಯಿತು.

ಇಲ್ಲಿನ ವೀರಸೌಧದ ಬಳಿಯಿರುವ ಸ್ವಾತಂತ್ರ್ಯ ಹೋರಾಟಗಾರ ಸ್ಥೂಪದ ಪಕ್ಕದಲ್ಲಿ ಶ್ರೀ ಪಥಂಜಲಿ ಯೋಗ ಸಮಿತಿ ವತಿಯಿಂದ ಸುಮಾರು 75 ಮಂದಿ ಯೋಗಾಪಟುಗಳು ಯೋಗಾಸನ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಗೌರಿಬಿದನೂರು ಶಾಸಕರಾದ ಎನ್.ಎಚ್.ಶಿವಶಂಕರರೆಡ್ಡಿ, ತಹಸೀಲ್ದಾರ್ ಶ್ರೀನಿವಾಸ್ ಹಾಗೂ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾಡಳಿತ, ಪಂಚಾಯತ್ ವತಿಯಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ರಾಜ್ಯಪಾಲ ವಜುಬಾಯ್ ವಾಲಾ , ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಲಿದ್ದು, ವೀರ ಯೋಧರಿಗೆ ನಮನ ಸಲ್ಲಿಸಲಿದ್ದಾರೆ.

ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯದ ದಂಡಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಅಜಾದ್ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಅದಾದ ಬಳಿಕ ವಿಧುರಾಶ್ವತ್ಥದಲ್ಲಿ ರಾಜ್ಯ ಮಟ್ಟದ ಅಮೃತ ಮಹೋತ್ಸವಕ್ಕೆ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss