Sunday, April 11, 2021

Latest Posts

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಮೂವರ ಸಾವು

ಹೊಸದಿಗಂತ ವರದಿ,ಮೈಸೂರು:

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರ ನೆರಗ್ಯಾತನಹಳ್ಳಿ ಗ್ರಾಮದಲ್ಲಿ
ತಿ.ನರಸೀಪುರ ತಾಲೂಕಿನ ಹಸುವಟ್ಟಿ ಗ್ರಾಮದ ನಿವಾಸಿಯಾದ ಕಾರಿನ ಚಾಲಕ ಸುರೇಶ್ (24), ಕಿರಣ್ (24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಯಾಣಿಕ ಮಹೇಶ್ (25) ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ. ಚಾಲಕ ಸುರೇಶ್ ವೇಗವಾಗಿ ಕಾರು ಚಲಾಯಿಸುತ್ತಿದ್ದ, ಈ ವೇಳೆ ಅದು ನಿಯಂತ್ರಣ ತಪ್ಪಿ ಈ ಅಪಘಾತವುಂಟಾಗಿದೆ. ವಿಷಯ ತಿಳಿದು
ತಿ.ನರಸೀಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss