ಆಟೋ ಚಲಾಯಿಸುವಾಗಲೇ ಹೃದಯಾಘಾತದಿಂದ ಚಾಲಕ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇಂದು ಅಂತಹದ್ದೇ ದುರಂತಕ್ಕೆ ಆಟೋ ಚಾಲಕರೊಬ್ಬರು ಬಲಿಯಾಗಿದ್ದಾರೆ. ಆಟೋ ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ಚಾಲಕ ಮೃತಪಟ್ಟಿರುವ ಘಟನೆ ಇಂದು ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಂಪಗಿರಾಮನಗರದಲ್ಲಿ ಈ ಘಟನೆ ನಡೆದಿದೆ. 53 ವರ್ಷದ ತಿಮ್ಮೇಶ್‌ ಹೃದಯಾಘಾತದಿಂದ ಸಾವನ್ನಪ್ಪಿದ ದುರ್ದೈವಿ.

ಇಂದು ಬೆಳಗ್ಗೆ ಟೀ ಕುಡಿದ ಬಳಿಕ ತಿಮ್ಮೇಶ್‌ ಆಟೋ ಚಲಾಯಿಸಿದ್ದಾರೆ. ಮಾರ್ಗಮಧ್ಯೆಯೇ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಆಟೋ ನಿಲ್ಲಿಸಿ ಕೆಳಗಿಳಿದಿದ್ದಾರೆ. ಬಳಿಕ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.
ತಕ್ಷಣವೇ ಅಕ್ಕಪಕ್ಕದ ಅಂಗಡಿಯವರು ಅವರನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ತಿಮ್ಮೇಶ್ ಅವರ ಜೀವ ಹೊರಟು ಹೋಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!