Saturday, February 4, 2023

Latest Posts

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಗೆ ಕಾರು ಡಿಕ್ಕಿ : 3 ಮುಖ್ಯ ಪೇದೆಗಳಿಗೆ ಗಾಯ

ಹೊಸದಿಗಂತ ವರದಿ ಚಿತ್ರದುರ್ಗ :

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 3 ಮುಖ್ಯ ಪೊಲೀಸ್ ಪೇದೆಗಳು ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಅಶೋಕ್ ಸಿದ್ದಾಪುರ ಬಳಿ ನಡೆದಿದೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇ ಔಟ್ ಠಾಣೆಯ ಮುಖ್ಯಪೇದೆಗಳಾದ ಮಂಜುನಾಥ್, ನರೇಶ್ ಮತ್ತು ಶ್ರೀನಿವಾಸ್ ಅವರು ಕೆಲಸದ ನಿಮಿತ್ತ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಲಾರಿ ಓವರ್ ಟೆಕ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರ್ ಡಿಕ್ಕಿ ಹೊಡೆದಿದ್ದು ಗಾಯಾಳುಗಳನ್ನು ಬಳ್ಳಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸದ್ಯ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!