ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕಿಯ ನಿಯಂತ್ರಣ ತಪ್ಪಿದ ಕಾರೊಂದು ಅಂಗಡಿಗೆ ನುಗ್ಗಿದ್ದು, ಅಂಗಡಿ ಮುಂದೆ ಕುಳಿತಿದ್ದ ವೃದ್ಧೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬಂಟ್ವಾಳದ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ.
ಅಪಘಾತದ ಭೀಕರ ದೃಶ್ಯ ಅಂಗಡಿ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಂಟ್ವಾಳದ ವಾಮದಪದವು ನಿವಾಸಿ 91 ವರ್ಷದ ಸುಮತಿ ಸಾವನ್ನಪ್ಪಿದ ದುರ್ದೈವಿ. ಮತ್ತೋರ್ವ ಗ್ರಾಹಕ ಸ್ಥಳೀಯ ನಿವಾಸಿ ಲೂಯಿಸ್ ಡಿಕೋಸ್ತಾ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶೋಭಾ ಎಂಬವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಅಂಗಡಿಗೆ ನುಗ್ಗಿ ಬಂದಿದೆ. ಈ ವೇಳೆ ಅಂಗಡಿಗೆ ಬಂದಿದ್ದ ಗ್ರಾಹಕ ಲೂಯಿಸ್ ಡಿಕೋಸ್ತಾರಿಗೆ ಕಾರು ಡಿಕ್ಕಿ ಹೊಡೆದು, ಬಳಿಕ ಅಲ್ಲೇ ಕೂತಿದ್ದ ವೃದ್ಧೆ ಸುಮತಿಗೆ ಡಿಕ್ಕಿಯಾಗಿದೆ.