May 10, 2026
Sunday, May 10, 2026
spot_img

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರ ದುರ್ಮ*ರಣ

ಹೊಸದಿಗಂತ ವರದಿ ಉತ್ತರಕನ್ನಡ:

ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್ ಅಜಗಾಂವ ಸಮೀಪ ಸೋಮವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಈರ್ವರು ಮೃತಪಟ್ಟ ಘಟನೆ ನಡೆದಿದೆ.

ದಾಂಡೇಲಿಯಿಂದ ಹಳಿಯಾಳ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಎರಡು ಮರದ ನಡುವೆ ಸಿಲುಕಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ:

ಮೃತಪಟ್ಟವರಲ್ಲಿ ಓರ್ವ ಧಾರವಾಡದ ಫಾರೂಖ್ ಸಾಬ್ ಹಾಗೂ ಇನ್ನೋರ್ವ ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಎಂದು ತಿಳಿದು ಬಂದಿದೆ. ಮೃತ ದೇಹವನ್ನು ಹಳಿಯಾಳದ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಚಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಸಿಪಿಐ ಶಿವಾನಂದ ಅಂಬಿಗೇರ ಹಾಗೂ ದಾಂಡೇಲಿ ಗ್ರಾಮೀಣ ಠಾಣೆಯ ಪಿಎಸ್ಐ ಶಿವಾನಂದ ನಾವದಗಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !