ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ದಿಂದೋರಿಯ ಬದ್ಝರ್ ಘಾಟ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕ್ಅಪ್ ವಾಹನ ಪಲ್ಟಿಯಾಗಿ 14 ಪ್ರಯಾಣಿಕರು ಸಾವನ್ನಪ್ಪಿ, 20 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿ ರಕ್ಷಿಸಿದ್ದಾರೆ.
ವಾಹನ ನಿಯಂತ್ರಣ ತಪ್ಪಿ ಬಿಚಿಯಾ-ಬರ್ಜಾರ್ ಗ್ರಾಮದಲ್ಲಿ 25 ಅಡಿ ಆಳದ ಹೊಲಕ್ಕೆ ಉರುಳಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಅಪಘಾತದ ಸಮಯದಲ್ಲಿ ವಾಹನದಲ್ಲಿ ಸುಮಾರು 35 ಜನರು ಸಾಮಾಜಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದರು ಎನ್ನಲಾಗಿದೆ.
ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಶಹಾಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಮಿಶ್ರಾ ತಿಳಿಸಿದ್ದಾರೆ.